-->

ಮೊಸರು 10 ಪ್ರಯೋಜನಗಳು - 10 Benefits of having curd

ಮೊಸರನ್ನು ಈ 10 ಪದಾರ್ಥಗಳೊಂದಿಗೆ ಪ್ರತ್ಯೇಕವಾಗಿ ಬೆರೆಸಿಕೊಂಡು ತಿನ್ನಿ, ಅದ್ಭುತ ಫಲಿತಾಂಶ ಪಡೆಯಿರಿ.

🍚🍚🍚🍚🍚🍚🍚🍚

*ಹಾಲಿನಿಂದ ತಯಾರಿಸುವ ಮೊಸರೆಂದರೆ ಬಹಳಷ್ಟು ಮಂದಿಗೆ ಇಷ್ಟ. ಕೆಲವರಂತೂ ಊಟದ ಬಳಿಕ ಮೊಸರು ತಿನ್ನದಿದ್ದರೆ ಅವರಿಗೆ ಪರಿಪೂರ್ಣ ತೃಪ್ತಿ ಸಿಗಲ್ಲ. ಭೋಜನ ಅಸಂಪೂರ್ಣವಾಗಿ ಮುಗಿದಂತೆ ಭಾವಿಸುತ್ತಾರೆ. ಆ ಮಾತು ಬಿಡಿ, ಮೊಸರಿನಿಂದ ನಮಗೆ ಅನೇಕ ವಿಧವಾದ ಲಾಭಗಳಿವೆ. ಈ ವಿಷಯ ಎಲ್ಲರಿಗೂ ಗೊತ್ತಿರುವುದೇ. ಮೊಸರಿನೊಂದಿಗೆ ಕೆಲವು ಆಹಾರ ಪದಾರ್ಥಗಳನ್ನು ಬೆರೆಸಿಕೊಂಡು ತಿಂದರೆ ಹಲವು ವಿಧದ ಅನಾರೋಗ್ಯ ಸಮಸ್ಯೆಗಳು ಸುಲಭವಾಗಿ ದೂರವಾಗುತ್ತವೆ. ಆ ಆಹಾರ ಯಾವುದು ಎಂದು ಈಗ ತಿಳಿದುಕೊಳ್ಳೋಣ ಬನ್ನಿ.*

*🍚1. ಸ್ವಲ್ಪ ಜೀರಿಗೆ ತೆಗೆದುಕೊಂಡು ಪುಡಿ ಮಾಡಿ ಅದನ್ನು ಒಂದು ಕಪ್ ಮೊಸರಿನಲ್ಲಿ ಬೆರೆಸಿಕೊಂಡು ತಿಂದರೆ ಶೀಘ್ರವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು.*

*🍚2. ಸ್ವಲ್ಪ ಕಪ್ಪು ಉಪ್ಪನ್ನು ತೆಗೆದುಕೊಂಡು ನುಣ್ಣಗೆ ಮಾಡಿಕೊಳ್ಳಿ. ಅದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿಕೊಂಡು ಕುಡಿಯಬೇಕು. ಇದರಿಂದ ಜೀರ್ಣ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಮುಖ್ಯವಾಗಿ ಗ್ಯಾಸ್, ಅಸಿಡಿಟಿಯಂತಹವು ಕಡಿಮೆಯಾಗುತ್ತವೆ.*

*🍚3. ಸ್ವಲ್ಪ ಮೊಸರಿನೊಂದಿಗೆ ಸಕ್ಕರೆ ಬೆರೆಸಿಕೊಂಡು ತಿನ್ನಬೇಕು. ಇದರಿಂದ ದೇಹಕ್ಕೆ ಕೂಡಲೆ ಶಕ್ತಿ ಸಿಗುತ್ತದೆ. ಮೂತ್ರಕೋಶದ ಸಮಸ್ಯೆಗಳು ದೂರವಾಗುತ್ತವೆ.*

*🍚4. ಸ್ವಲ್ಪ ಓಂಕಾಳನ್ನು ತೆಗೆದುಕೊಂಡು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ತಿನ್ನಬೇಕು. ಇದರಿಂದ ಬಾಯಿಹುಣ್ಣು, ಹಲ್ಲುನೋವು, ಇತರೆ ದಂತ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.*

*🍚5. ಒಂದು ಕಪ್ಪು ಮೊಸರಿನೊಂದಿಗೆ ಸ್ವಲ್ಪ ಕಪ್ಪು ಮೆಣಸಿನ ಪುಡಿಯನ್ನು ಬೆರೆಸಿ ತಿನ್ನಬೇಕು. ಇದರಿಂದ ಮಲಬದ್ಧತೆ ದೂರವಾಗುತ್ತದೆ. ತಿಂದ ಆಹಾರ ಸರಿಯಾಗಿ ಪಚನವಾಗುತ್ತದೆ.*

*🍚6. ಮೊಸರಿನಲ್ಲಿ ಸ್ವಲ್ಪ ಓಟ್ಸ್ ಬೆರೆಸಿ ತಿನ್ನಬೇಕು. ಹೀಗೆ ಮಾಡುವುದರಿಂದ ಒಳ್ಳೇ ಪ್ರೋಬಯೋಟಿಕ್ಸ್, ಪ್ರೋಟೀನ್ ಲಭಿಸುತ್ತದೆ. ಇವು ಮಾಂಸಖಂಡಗಳ ಶಕ್ತಿಗೆ ಸಹಾಯಕಾರಿ.*

*🍚7. ಮೊಸರಿನೊಂದಿಗೆ ವಿವಿಧ ರೀತಿಯ ಹಣ್ಣುಗಳನ್ನು ಬೆರೆಸಿಕೊಂಡು ತಿಂದರೆ ಶರೀರ ರೋಗನಿರೋಧಕ ಶಕ್ತಿ ಹೆಚ್ಚುತ್ತೆ. ಹಲವು ವಿಧದ ಇನ್‌ಫೆಕ್ಷನ್‌ಗಳು, ರೋಗಗಳು ಬರದಂತೆ ನೋಡಿಕೊಳ್ಳಬಹುದು.*

*🍚8. ಮೊಸರಿನೊಂದಿಗೆ ಸ್ವಲ್ಪ ಅರಿಶಿಣ, ಸ್ವಲ್ಪ ಶುಂಠಿ ಬೆರೆಸಿ ತಿನ್ನಬೇಕು. ಇದರಿಂದ ಫೋಲಿಕ್ ಆಸಿಡ್ ಶರೀರಕ್ಕೆ ಸೇರುತ್ತದೆ. ಇದು ಚಿಕ್ಕಮಕ್ಕಳಿಗೆ, ಗರ್ಭಿಣಿಯರಿಗೆ ಎಷ್ಟೋ ಉಪಯುಕ್ತ.*

*🍚9. ಮೊಸರಿನೊಂದಿಗೆ ಆರೆಂಜ್ ಜ್ಯೂಸ್ ಬೆರೆಸಿಕೊಂಡು ತಿನ್ನಬೇಕು. ಇದರಿಂದ ಶರೀರಕ್ಕೆ ಸಾಕಷ್ಟು ವಿಟಮಿನ್ ಸಿ ಲಭ್ಯವಾಗುತ್ತದೆ. ಇದು ಕೀಲು ನೋವು ಕಡಿಮೆ ಮಾಡುತ್ತೆ. ವೃದ್ಧಾಪ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.*

*🍚10. ಮೊಸರಿನೊಂದಿಗೆ ಜೇನುತುಪ್ಪ ಬೆರೆಸಿ ತಿಂದರೆ ಹೊಟ್ಟೆಯಲ್ಲಿನ ಅಲ್ಸರ್ ಮಾಯವಾಗುತ್ತದೆ. ಈ ಮಿಶ್ರಣ ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಇದರಿಂದ ದೇಹದಲ್ಲಿನ ಇನ್‌‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ*
🍚🍚🍚🍚🍚🍚🍚🍚
–>